ಬೆಂಗಳೂರು: ಪಶ್ಚಿಮಘಟ್ಟ ಅರಣ್ಯ ಪ್ರದೇಶಗಳಲ್ಲಿ ಉಗಮವಾಗುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಮತ್ತು ಪಟ್ಟಣಗಳಲ್ಲಿ ಹಸಿರು ಸೆಸ್ ವಿಧಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.
ಈ ಕುರಿತಾಗಿ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಕಾವೇರಿ, ಕೃಷ್ಣ, ತುಂಗಾ, ಭದ್ರಾ, ಮಲಪ್ರಭಾ, ಘಟಪ್ರಭಾ, ಹೇಮಾವತಿ ಸೇರಿದಂತೆ 11ಕ್ಕೂ ಹೆಚ್ಚಿನ ನದಿಗಳು ಉಗಮವಾಗುತ್ತದೆ .ಈ ನದಿಗಳ ನೀರನ್ನು ಬೆಂಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಮಂಗಳೂರು, ಬೆಳಗಾವಿ, ಚಿಕ್ಕಮಗಳೂರು, ಬಳ್ಳಾರಿ, ಬೆಳಗಾವಿ, ಸೇರಿದಂತೆ ಬಹುತೇಕ ನಗರ, ಪಟ್ಟಣಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಪೂರೈಕೆ ಮಾಡುತ್ತಿದ್ದು, ಇಲ್ಲಿನ ಸ್ಥಳೀಯ ಮಂಡಳಿಗಳಿಂದ ನೀರಿನ ಸಂಪರ್ಕ ಪಡೆದವರಿಗೆ ನೀರಿನ ಬಿಲ್ ನಲ್ಲಿ ಹಸಿರು ಸೆಸ್ ವಿಧಿಸುವ ಪ್ರಸ್ತಾವನೆ ಸಿದ್ಧಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.