ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್ ನಿರ್ಮಿಸಬೇಕೆಂಬ ಬೇಡಿಕೆ ಇದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ
ಈವರೆಗೆ 300 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಾಜ್ಯದ ಮತ್ತೊಂದು ಆನೆ ಸಂರಕ್ಷಣೆ, ಆರೈಕೆ ಮತ್ತು ಪುನರ್ವಸತಿ ಶಿಬಿರ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.