alex Certify ಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ಘಟನೆ ನಡೆದಿದೆ.

ಪುಣಜನೂರು ಹೊಸಫೋಡು ನಿವಾಸಿ ನಂಜಯ್ಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಆನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆಯಲ್ಲಿ ಕಾಡಾನೆ ದಾಳಿ ಮಾಡಿದೆ. ಎರಡು ದಿನಗಳ ಹಿಂದೆಯಷ್ಟೇ ನಂಜಯ್ಯ ಅವರನ್ನು ದಿನಗೂಲಿ ನೌಕರನಾಗಿ ಅರಣ್ಯ ಇಲಾಖೆ ನೇಮಕ ಮಾಡಿಕೊಂಡಿತ್ತು. ಇಂದು ಕಾಡಾನೆ ಹಿಂಡು ಓಡಿಸುವ ವೇಳೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...