ಬೆಂಗಳೂರು: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸುಂದರೇಶ್ ಸಾವನ್ನಪ್ಪಿದ್ದಾರೆ, ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಂದರೇಶ್ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದಲ್ಲಿ ಕಾಡ್ಗಿಚ್ಚು ಉಂಟಾಗಿತ್ತು. ಫೆಬ್ರವರಿ 16ರಂದು ಕಾಡುಮನೆ ಎಸ್ಟೇಟ್ ಸಮೀಪ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಹೋಗಿದ್ದ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಡಿ.ಆರ್.ಎಫ್.ಒ. ಮಂಜುನಾಥ್, ಫಾರೆಸ್ಟ್ ಗಾರ್ಡ್ ಸುಂದರೇಶ್, ವಾಚರ್ ಗಳಾದ ತುಂಗೇಶ್ ಮತ್ತು ಮಹೇಶ್ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಯುತ್ತಿದ್ದ ಸುಂದರೇಶ್ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.