ಬೆಂಗಳೂರು: ಅರಣ್ಯ ಜಮೀನಿನ ದಾಖಲೆಗಳನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು ಉತ್ತರ ವಿಭಾಗದ ಅರಣ್ಯ ಭೂಮಿ ದಾಖಲೆಗಳನ್ನು ಸರ್ಕಾರಿ ಕಂದಾಯ ಜಮೀನು ಎಂದು ತಿದ್ದುಪಡಿ ಮಾಡಿದ್ದ ಹಿಂದಿನ ಉಪವಿಭಾಗಾಧಿಕಾರಿ ಎಂ.ಜಿ.ಶಿವಣ್ಣ ಹಾಗೂ ಬೆಂಗಳೂರು ಪೂರ್ವ ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ವಿರುದ್ಧ ಎಫ್ಐಆರ್ ದಾಖಲಾಗಿದೆ.
2006ರಲ್ಲಿ ಅರಣ್ಯ ಎಂದು ವರ್ಗೀಕರಣವಾಗಿದ್ದ ನೂರಾರು ಕೋಟಿ ಮೌಲ್ಯದ ಅರಣ್ಯ ಭೂಮಿಯನ್ನು ಕಂದಾಯ ಭೂಮಿ ಎಂದು ತಿದ್ದುಪಡಿ ಮಾಡಿದ್ದರು. ಅರಣ್ಯ ಜೀವಶಾಸ್ತ್ರ, ಪರಿಸರ ಸಚಿವರ ಸೂಚನೆ ಮೇರೆಗೆ ಎಫ್ ಐ ಆರ್ ದಾಖಲಿಸಲಾಗಿದೆ.