
ಬೆಂಗಳೂರು: ಅರಣ್ಯ ಇಲಾಖೆ ಸಿಬ್ಬಂದಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಶುಕ್ರವಾರ ಅರಣ್ಯ ಭವನದಲ್ಲಿ ಅರಣ್ಯ ಪಡೆಯ ಮುಖ್ಯಸ್ಥ ಮೀನಾಕ್ಷಿ ನೇಗಿ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರನ್ನು ಅಭಿನಂದಿಸಿ ಸಚಿವರು ಮಾತನಾಡಿದರು.
ವನ್ಯಜೀವಿ ದಾಳಿ, ಕಳ್ಳ ಬೇಟೆಗಾರರ ದಾಳಿಯ ಭೀತಿಯ ನಡುವೆಯೂ ಅರಣ್ಯ, ವನ್ಯಜೀವಿ ಸಂರಕ್ಷಣೆಗೆ ಶ್ರಮಿಸುತ್ತಿರುವ ಸಿಬ್ಬಂದಿಗೆ ಅಪಾಯ ಭತ್ಯೆ ನೀಡಲಾಗುವುದು ಎಂದು ಹೇಳಿದ್ದಾರೆ.
ಅರಣ್ಯ ಸಿಬ್ಬಂದಿಯ ಬಹುದಿನಗಳ ಬೇಡಿಕೆಯಾಗಿರುವ ಪೊಲೀಸ್ ಕ್ಯಾಂಟೀನ್ ಮಾದರಿ ಕ್ಯಾಂಟೀನ್ ವ್ಯವಸ್ಥೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.