ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥಕ್ಕೆ ಬಾಕಿ ಉಳಿದಿರುವ ಮತ್ತು ಪಟ್ಟಾ ಭೂಮಿ ಸೇರಿದಂತೆ ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿ ತೆರವಿನ ಕುರಿತು ಸತ್ಯಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
2015ರ ನಂತರ ಮತ್ತು ದೊಡ್ಡ ಪ್ರಮಾಣದಲ್ಲಿ ಆಗಿರುವ ಅರಣ್ಯ ಮಾತ್ರ ತೆರವು ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಕರಾವಳಿ, ಮಲೆನಾಡು ಭಾಗದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಯ ಬಗ್ಗೆ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದು, ಅರಣ್ಯ ಭೂಮಿಯ ಬಗ್ಗೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಲಾಗುತ್ತಿದೆ. ಸರ್ಕಾರ ಬಡವರ ಭೂಮಿ ಒತ್ತುವರಿ ತೆರವು ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.
ದೊಡ್ಡ ಒತ್ತುವರಿ ಮತ್ತು 2015ರ ನಂತರದ ಒತ್ತುವರಿಯನ್ನು ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶಿಸಿದ್ದು, ಅದರ ಆಧಾರದಲ್ಲಿ ಒತ್ತುವರಿ ತೆರವಿಗೆ ಆದೇಶಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.