
ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಅರಣ್ಯ ವೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಉಡುಪಿ ಜಿಲ್ಲೆ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿ ಬಂಗಾರಪ್ಪ, ಅರಣ್ಯ ವೀಕ್ಷಕ ವಿನಾಯಕ್ ಲೋಕಾಯುಕ್ತ ಬಲೆಗೆ ಬಿದ್ದವರು ಎನ್ನಲಾಗಿದೆ. ಹಲಸಿನ ಮರ ತೆರವಿಗೆ ಅನುಮತಿ ನೀಡಲು 4000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಲೆಗೆ ಬಿದ್ದಿದ್ದಾರೆ.
ಮೊಹಮ್ಮದ್ ಅನ್ವರ್ ಹಸನ್ ಅವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಎಸ್ಪಿ ಎಂ.ಎ. ನಟರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.