alex Certify ಬಾವಿಗೆ ಬಿದ್ದಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು: ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾವಿಗೆ ಬಿದ್ದಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು: ವಿಡಿಯೋ ವೈರಲ್

ಮಹಾರಾಷ್ಟ್ರದಲ್ಲಿ ತೆರೆದ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಶಾಂತ ನಂದಾ ಅವರು ಭಾನುವಾರ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದು 16 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು 800 ಲೈಕ್‌ಗಳೊಂದಿಗೆ ವೈರಲ್ ಆಗಿದೆ.

ಬಾವಿಗೆ ಬಿದ್ದಿದ್ದ ಗಂಡು ಚಿರತೆಯನ್ನು ಬಾವಿಯಿಂದ ಮೇಲೆತ್ತುತ್ತಿದ್ದಂತೆ ಘರ್ಜಿಸುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು. ಚಿರತೆಯನ್ನು ರಕ್ಷಿಸಲು ರಕ್ಷಕರು ಪಂಜರವನ್ನು ಬಾವಿಗೆ ಇಳಿಸಿದರು. ಚಿರತೆಯನ್ನು ಸೆರೆಹಿಡಿದು ಹಗ್ಗಗಳನ್ನು ಬಳಸಿ ಪಂಜರ ಸಹಿತ ಮೇಲಕ್ಕೆ ಎತ್ತಿದರು. ಅದೃಷ್ಟವಶಾತ್ ಚಿರತೆ ಬದುಕುಳಿದಿದೆ.

ಕಾಡು ಪ್ರಾಣಿಗಳು ಇಂತಹ ಅಪಾಯಕಾರಿ ಸನ್ನಿವೇಶಗಳಿಗೆ ಸಿಲುಕುವುದನ್ನು ತಡೆಯಲು ತೆರೆದ ಬಾವಿಗಳನ್ನು ಮುಚ್ಚುವಂತೆ ಐಎಫ್‌ಎಸ್ ಅಧಿಕಾರಿ ಜನರನ್ನು ವಿನಂತಿಸಿದರು. ‘ಮಹಾರಾಷ್ಟ್ರದಲ್ಲಿ ತೆರೆದ ಬಾವಿಯಿಂದ ಗಂಡು ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ. ಕಾಡು ಪ್ರಾಣಿಗಳಿಗೆ ಇಂತಹ ಆಘಾತವನ್ನು ತಪ್ಪಿಸಲು ದಯವಿಟ್ಟು ತೆರೆದ ಬಾವಿಗಳನ್ನು ಮುಚ್ಚಿ’ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಚಿರತೆಗೆ ಯಾವುದೇ ಹಾನಿಯಾಗದಂತೆ ಯಶಸ್ವಿಯಾಗಿ ರಕ್ಷಿಸಿದ ಅರಣ್ಯಾಧಿಕಾರಿಗಳ ಪ್ರಯತ್ನವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

— Susanta Nanda IFS (@susantananda3) June 18, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...