ಬೆಂಗಳೂರು : ಸಚಿವ ಚಲುವರಾಯಸ್ವಾಮಿ ವಿರುದ್ಧ ನಕಲಿ ಪತ್ರ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದರು.
ಇವರನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು ಭಾನುವಾರ ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಮುಂದೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರೂ ಕೋರ್ಟ್ ಮೂರು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಪ್ರತಿ ಟೆಂಡರ್ ಗೂ ಲಕ್ಷ ಲಕ್ಷ ರೂಪಾಯಿ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಕೃಷಿ ಇಲಾಖೆಯ ಅಧಿಕಾರಿಗಳ ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಪ್ರಕರಣ ಬರೆದ ಆರೋಪ ಸಂಬಂಧ ಸಿಐಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಗೂ ಕೃಷಿ ಇಲಾಖೆಯ ಅಧಿಕಾರಿ ಸುದರ್ಶನ್ ಬಂಧಿತ ಆರೋಪಿಗಳಾಗಿದ್ದಾರೆ.