ಬೆಂಗಳೂರು : ಆನೆ, ಹುಲಿ ಮುಂತಾದ ವನ್ಯ ಪ್ರಾಣಿಗಳು ಕಾಡಿನಿಂದ ಹೊರಗೆ ಬರದಂತೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ರಾಜ್ಯದಲ್ಲಿ ಪ್ರತಿವರ್ಷ 50 ರಿಂದ 60 ಮಂದಿ ಕಾಡುಪ್ರಾಣಿಗಳ ದಾಳಿಯಿಂದ ಮೃತಪಡುತ್ತಿದ್ದಾರೆ. ಆನೆ, ಹುಲಿ ಮುಂತಾದ ವನ್ಯ ಪ್ರಾಣಿಗಳು ಕಾಡಿನಿಂದ ಹೊರಗೆ ಬರದಂತೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲಾಗುವುದು. 660 ಕಿ.ಮೀ ಪ್ರದೇಶ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಈಗಾಗಲೇ 312 ಕಿ.ಮೀ ವ್ಯಾಪ್ತಿಯಲ್ಲಿ ಅಳವಡಿಕೆ ಕಾರ್ಯ ಮುಗಿದಿದೆ. 120 ಕಿ.ಮೀ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ ಎಂದರು.
ಉಳಿದ 220 ಕಿ.ಮೀ ವ್ಯಾಪ್ತಿಯಲ್ಲಿ ರೈಲು ಕಂಬಿಗಳ ತಡೆಗೋಡೆ ನಿರ್ಮಿಸಲು ಮುಂದಿನ ಬಜೆಟ್ನಲ್ಲಿ ₹ 200 ಕೋಟಿ ಅನುದಾನ ನೀಡುವಂತೆ ಪ್ರಸ್ತಾಪ ಸಲ್ಲಿಸಲಾಗಿದೆ. ವನ್ಯಜೀವಿ- ಮಾನವ ಸಂಘರ್ಷ ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.