ಬೆಂಗಳೂರು : ಕಾಡಾನೆ ಹಾವಳಿ ಹೆಚ್ಚಿರುವ ಜಿಲ್ಲೆಗಳಲ್ಲಿ ಜಿಲ್ಲಾ ‘ಆನೆ ಕಾರ್ಯಪಡೆ’ ರಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ರಾಜ್ಯದಲ್ಲಿ 640 ಕಿ.ಮೀ. ರೈಲ್ವೆ ಹಳಿ ಬ್ಯಾರಿಕೇಡ್ ಆಳವಡಿಸಲಾಗುತ್ತಿದ್ದು, ಈ ಪೈಕಿ 312 ಕಿ.ಮೀ. ಮಾರ್ಗದಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಳಿದಂತೆ ಕಾಡಾನೆ ಹಾವಳಿ ಹೆಚ್ಚಿರುವ ಜಿಲ್ಲೆಗಳಲ್ಲಿ ಜಿಲ್ಲಾ ಆನೆ ಕಾರ್ಯಪಡೆ ರಚಿಸಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಈಶ್ವರ ಖಂಡ್ರೆ ಹೇಳಿದರು.
ರಾಜ್ಯದಲ್ಲಿ ಹಲವು ಕಡೆ ಕಾಡಾನೆ ಹಾವಳಿ ಮಿತಿ ಮೀರಿದ್ದು, ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿದೆ. ಮಿತಿ ಮೀರಿದ ಕಾಡಾನೆ ಉಪಟಳದಿಂದ ಕಾಫಿನಾಡು ಚಿಕ್ಕಮಗಳೂರು, ಹಾಸನ, ಕೊಡಗು ಭಾಗದ ಜನರು ಆತಂಕಕ್ಕೀಡಾಗಿದ್ದಾರೆ.