ನವದೆಹಲಿ : ಆಂಧ್ರ ಮಾಜಿ ಸಿಎಂ ಜಗನ್ ತಿರುಪತಿ ಪ್ರವಾಸ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲಹೊತ್ತಿನಲ್ಲೇ ಸುದ್ದಿಗೋಷ್ಟಿ ನಡೆಸಿ ಆಂಧ್ರ ಮಾಜಿ ಸಿಎಂ ಜಗನ್ ತಿರುಪತಿ ಪ್ರವಾಸ ರದ್ದಾಗಿರುವ ಕುರಿತು ಸ್ಪಷ್ಟನೆ ನೀಡಲಿದ್ದಾರೆ. ಇಂದು ಸಂಜೆ ಮಾಜಿ ಸಿಎಂ ವೈ.ಎಸ್.ಜಗನ್ಮೋಹನ್ ರೆಡ್ಡಿ ತಿರುಪತಿ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದರು.
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆ ಬಳಸಲಾಗಿರುವ ವಿಚಾರ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಒಂಬತ್ತು ಸದಸ್ಯರ ವಿಶೇಷ ತನಿಖಾ ದಳವನ್ನು ಸಿಎಂ ಚಂದ್ರಬಾಬು ನಾಯ್ಡು ರಚಿಸಿದ್ದಾರೆ. ಗುರುವಾರ ಈ ಸಂಬಂಧ, ಮುಖ್ಯ ಕಾರ್ಯದರ್ಶಿ ಆದೇಶವನ್ನು ಹೊರಡಿಸಿದ್ದಾರೆ.
ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ವಿವಾದ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.