ಢಾಕಾ: ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ಪಂದ್ಯದ ವೇಳೆ ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ರಾಜಧಾನಿ ಢಾಕಾದ ಹೊರವಲಯದಲ್ಲಿರುವ ಸಾವರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಮಾಧ್ಯಮಗಳು ಅವರ ಸ್ಥಿತಿಯನ್ನು ‘ಗಂಭೀರ’ ಎಂದು ಹೇಳಿದೆ.
ಡಾಕಾ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.