ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ, ರಜತ್ ಇಬ್ಬರನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯದ ಆದೇಶ ಹೊರಡಿಸಿದೆ.
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಗೌಡ ಹಾಗೂ ರಜತ್ ಇಬ್ಬರನ್ನು ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಇಬ್ಬರೂ ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳಿ ಎಂದು ಸೂಚಿಸಿದ್ದಾರೆ. ವಿನಯ್ ಹಾಗೂ ರಜತ್ ಗೆ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.