ಬೆಂಗಳೂರು: ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮಾಚರಣೆ ಕಳೆಕಟ್ಟಿದೆ.
ಬಿಡದಿ ತೋಟದ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಮಾಜಿ ಸಿಎಂ ಕುಮಾರಸ್ವಾಮಿ ವಿಶೇಷ ಪೂಜೆ ನೆರವೇರಿಸಿದರು. ಇದೇ ವೇಳೆ ಗಣೇಶ ವೇಷಧಾರಿ ಬಾಲಕನೋರ್ವ ಕುಮಾರಸ್ವಾಮಿ ಮನೆಗೆ ಆಗಮಿಸಿದ್ದು ವಿಶೇಷವಾಗಿತ್ತು.
ಬಾಲ ಗಣೇಶ ವೇಷಧಾರಿ ಜೊತೆ ಕುಳಿತು ಕುಮಾರಸ್ವಾಮಿ ಕೆಲಕಾಲ ಮಾತುಕತೆ ನಡೆಸಿ ಸಂತಸ ವ್ಯಕ್ತಪಡಿಸಿದರು.