
ಬೆಂಗಳೂರು :ಲೋಕಸಭೆ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಇಂದು ಮಾಜಿ ಸಿಎಂ ಬಿ.ಎಸ್. ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿದ ನಿಖಲ್ ಕುಮಾರಸ್ವಾಮಿ ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಬಳಿಕ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ನಂತರ ಬಿ.ಎಸ್. ಯಡಿಯೂರಪ್ಪರನ್ನು ನಿಖಿಲ್ ಕುಮಾರಸ್ವಾಮಿ ಸನ್ಮಾನಿಸಿದ್ದಾರೆ. ಈ ವೇಳೆ ಶಾಸಕ ಮುನಿರತ್ನ ಸೇರಿದಂತೆ ಹಲವರು ಉಪಸ್ಥಿತರಿದ್ದರು.