ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಹೆಚ್.ಡಿ.ಕುಮಾರಸ್ವಾಮಿ ನಿನ್ನೆಯಿಂದ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂರು ದಿನಗಳ ಕಾಲ ವೈದ್ಯರು ವಾರ್ಡ್ನಲ್ಲೇ ನಿಗಾ ವಹಿಸಲಿದ್ದಾರೆ ಎನ್ನಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ತಂದೆ ಆರೋಗ್ಯ ವಿಚಾರಿಸಲು ನಿಖಿಲ್ ಕುಮಾರಸ್ವಾಮಿ ಆಸ್ಪತ್ರೆಗೆ ಆಗಮಿಸಿದ್ದಾರೆ. ವಿದೇಶ ಪ್ರವಾಸದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ತಂದೆಗೆ ಅನಾರೋಗ್ಯ ಹಿನ್ನೆಲೆ ವಿದೇಶದಿಂದ ವಾಪಸಾಗಿದ್ದಾರೆ. ತೀವ್ರ ಜ್ವರದ ಹಿನ್ನೆಲೆ ಕುಮಾರಸ್ವಾಮಿ ಅವರನ್ನು ಐಸಿಯೂ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಹಿನ್ನೆಲೆ ಇದೀಗ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಕುಮಾರಸ್ವಾಮಿಯವರಿಗೆ ಮಧ್ಯರಾತ್ರಿ ಬಲಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಎಡ ಭಾಗದಲ್ಲಿ ರಕ್ತನಾಳ ಸಮಸ್ಯೆಯಾಗಿತ್ತು. ಈ ರೀತಿ ಕಾಯಿಲೆಯಿಂದ ರಕ್ಷಣೆ ಮಾಡುವುದು ಬಹಳ ಮುಖ್ಯ. ಸ್ಟ್ರೋಕ್ ಆದ 3 ಗಂಟೆಯೊಳಗೆ ಆಸ್ಪತ್ರೆಗೆ ಬಂದರೆ ಗುಣಪಡಿಸಬಹುದು. ದೊಡ್ಡ ಆಸ್ಪತ್ರೆಗೆ ಬಂದರೆ ಸ್ಟ್ರೋಕ್ ನಿಂದ ಗುಣಮುಖ ಮಾಡಬಹುದು. ಕುಮಾರಸ್ವಾಮಿ ತಕ್ಷಣ ಆಸ್ಪತ್ರೆಗೆ ಬಂದಿದ್ದರಿಂದ ಸೂಕ್ತ ಚಿಕಿತ್ಸೆ ನೀಡಿದ್ದೇವೆ ಎಂದು ಜಯನಗರ ಅಪೋಲೋ ಆಸ್ಪತ್ರೆಯ ವೈದ್ಯ ಸತೀಶ್ ಹೇಳಿದ್ದಾರೆ.