alex Certify BIG NEWS : ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಚೇತರಿಕೆ : ನಾಳೆ ಡಿಸ್ಚಾರ್ಜ್ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಚೇತರಿಕೆ : ನಾಳೆ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು : ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ನಿನ್ನೆಯಿಂದ ಹೆಚ್ಡಿಕೆ ಕುಟುಂಬದ ಹಲವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಹೆಚ್ಡಿಕೆ ಆರೋಗ್ಯ ವಿಚಾರಿಸಿದರು. ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಹೆಚ್ಡಿಕೆ ಆರೋಗ್ಯ ವಿಚಾರಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಅವರು ಬುಧವಾರ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ತೀವ್ರ ಜ್ವರದ ಹಿನ್ನೆಲೆ ಕುಮಾರಸ್ವಾಮಿ ಅವರನ್ನು ಐಸಿಯೂ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇಂದು ವಾರ್ಡ್ ಗೆ ಶಿಫ್ಟ್ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದ್ದು, ಸಂಜೆ ವೇಳೆಗೆ ವಾರ್ಡ್ ಗೆ ಶಿಫ್ಟ್ ಮಾಡಲಾಗುವುದಾಗಿ ವೈದ್ಯರು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...