ಬೆಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.
ಎಸ್.ಟಿ. ಸೋಮಶೇಖರ್ ಅವರಿಗೆ ಎನ್.ಡಿ.ಎ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತದಾನ ಮಾಡಲು ಸೂಚಿಸಲಾಗಿತ್ತು ಎನ್ನಲಾಗಿದೆ. ಆದರೆ, ಅವರು ಪಕ್ಷದ ವಿಪ್ನ್ನು ಉಲ್ಲಂಘಿಸಿ ಕಾಂಗ್ರೆಸ್ನ ಮೂರನೇ ಅಭ್ಯರ್ಥಿ ಜಿ.ಸಿ ಚಂದ್ರಶೇಖರ್ ಅವರಿಗೆ ಮತ ಹಾಕಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಮಂತ್ರಿಯಾದ ಸೋಮಶೇಖರ್ ಈಗ ತಿರುಗಿಬಿದ್ದು ಕಾಂಗ್ರೆಸ್ ಜತೆ ಸೇರಿಕೊಂಡಿದ್ದಾರೆ. ಇದು ಅವಕಾಶವಾದಿ ಧೋರಣೆ ಎಂದಿದ್ದಾರೆ.
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿಕೂಟದ (NDA) ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರ ಪರವಾಗಿ ನಾನು ಮತದಾನ ಮಾಡಿದೆ. ನಮ್ಮ ಮೈತ್ರಿ ಅಭ್ಯರ್ಥಿಗೆ ಮತ ಹಾಕಿದ ಎರಡೂ ಪಕ್ಷಗಳ ಎಲ್ಲಾ ಶಾಸಕರಿಗೂ ಹೃದಯಪೂರ್ವಕ ಧನ್ಯವಾದಗಳು ಎಂದು ಕುಮಾರಸ್ವಾಮಿ ಹೇಳಿದ್ದಾರೆ.