ಬೆಂಗಳೂರು : ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಮಾತುಕತೆ ನಡೆಸಲು ಮಾಜಿ ಸಿಎಂ ಕುಮಾರಸ್ವಾಮಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ.
ಹೌದು, ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ಸಂಬಂಧ ಇಂದು ಸಂಜೆ ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದು, ನಾಳೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಏಳು ಕ್ಷೇತ್ರಗಳನ್ನು ಜೆಡಿಎಸ್ ಗೆ ನೀಡಬೇಕೆಂದು ಕುಮಾರಸ್ವಾಮಿ ಬೇಡಿಕೆಯಿಡುವ ಸಾಧ್ಯತೆಯಿದ್ದು, ಕನಿಷ್ಟ 5 ಕ್ಷೇತ್ರವನ್ನಾದರೂ ಕೊಡಿ ಎಂದು ಮನವಿ ಸಲ್ಲಿಸುವ ಸಾಧ್ಯತೆ ಇದೆ. ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ ಏಳು ಕ್ಷೇತ್ರದ ಮೇಲೆ ಹೆಚ್ಡಿಕೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.