![](https://kannadadunia.com/wp-content/uploads/2023/04/30-jagadishshettar.jpg)
ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಕುರಿತಂತೆ ಗಂಭೀರ ಪ್ರಯತ್ನಗಳು ಆರಂಭವಾಗಿದ್ದು, ಹಾವೇರಿ\ಬೆಳಗಾವಿ ಲೋಕಸಭೆ ಟಿಕೆಟ್ ಆಫರ್ ನೀಡಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆತರುವ ಪ್ರಯತ್ನ ನಡೆದಿದೆ ಎನ್ನಲಾಗಿದ್ದು, ಅವರಿಗೆ ಲೋಕಸಭೆ ಚುನಾವಣೆಯ ಟಿಕೆಟ್ ನೀಡುವ ಕುರಿತಂತೆ ಚರ್ಚೆಗಳು ಆರಂಭವಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಹೀಗಾಗಿ ಶೆಟ್ಟರ್ ಅವರನನು ವಾಪಸ್ ಕರೆತಂತರೆ ಉತ್ತರ ಕರ್ನಾಟಕದಲ್ಲಿ ಅನುಕೂಲವಾಗಬಹುದು ಎಂಬ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ. ಇದರ ಭಾಗವಾಗಿ ಅವರ ಜೊತೆಗೆ ಶೀಘ್ರವೇ ಈ ಬಗ್ಗೆ ಮಾತುಕತೆ ನಡೆಸಬಹುದು ಎಂದು ಹೇಳಲಾಗುತ್ತಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸಿದ್ದರಿಂದ ಕೋಪಗೊಂಡ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡರೂ ಅವರನ್ನು ಬಳಿಕ ವಿಧಾನಪರಿಷತ್ ಸದಸ್ಯರನ್ನಾಗಿಸಿದೆ.