ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಕಾರು ಅಪಘಾತಕ್ಕೀಡಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ನಲ್ಲಿ ನಡೆದಿದೆ.
ಅದೃಷ್ಟವಶಾತ್ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಸ್ವಲ್ಪದರಲ್ಲೇ ಪಾರಾಗಿದ್ದು, ಅಪಘಾತದಿಂದ ಯಾವುದೇ ಗಾಯಗಳಾಗಿಲ್ಲ.ಅಪಘಾತ ಸಂಭವಿಸಿದಾಗ ಮುಫ್ತಿ ಮತ್ತು ಅವರ ಭದ್ರತಾ ಸಿಬ್ಬಂದಿ ಕಾರಿನಲ್ಲಿದ್ದರು. ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.