ಬೆಂಗಳೂರು : ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನರಾದ ಹಿನ್ನೆಲೆ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಕಾಂಗ್ರೆಸ್ ಸಂತಾಪ ಸೂಚಕ ಸಭೆ ಹಮ್ಮಿಕೊಂಡಿದೆ.
ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಿಂದ ಸಂತಾಪ ಸೂಚಕ ಸಭೆ ನಡೆಯಲಿದೆ.
ಈ ಬಗ್ಗೆ ಟ್ವೀಟ್ ನಲ್ಲಿ ಡಿಸಿಎಂ ಡಿಕೆಶಿ ಮಾಹಿತಿ ಹಂಚಿಕೊಂಡಿದ್ದಾರೆ.ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಸಂಜೆ 5ಗಂಟೆಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವ ಸಂತಾಪ ಸೂಚಕ ಸಭೆಯಲ್ಲಿ ಸಿದ್ದರಾಮಯ್ಯ ವರು ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಪ್ರಗತಿಯ ನಿಟ್ಟಿನಲ್ಲಿ ಶ್ರೀ ಎಸ್.ಎಂ. ಕೃಷ್ಣ ಅವರು ನೀಡಿದ ಕೊಡುಗೆಗಳು ಸ್ಮರಣೀಯ ಎಂದು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಸಂಜೆ 5ಗಂಟೆಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವ ಸಂತಾಪ ಸೂಚಕ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರು ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಪ್ರಗತಿಯ ನಿಟ್ಟಿನಲ್ಲಿ ಶ್ರೀ ಎಸ್.ಎಂ. ಕೃಷ್ಣ ಅವರು ನೀಡಿದ…
— DK Shivakumar (@DKShivakumar) December 10, 2024