ನವದೆಹಲಿ: ದೆಹಲಿಯ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಅವರನ್ನು ವಿಧಾನಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಶುಕ್ರವಾರ ಹೇಳಿದ್ದಾರೆ.
ಆನಂದ್ ಅವರು ಎಎಪಿ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಖಾತೆಗಳನ್ನು ಹೊಂದಿದ್ದರು. ಏಪ್ರಿಲ್‌ನಲ್ಲಿ ಅವರು ದೆಹಲಿ ಸಂಪುಟಕ್ಕೆ ರಾಜೀನಾಮೆ ನೀಡಿ ಆಡಳಿತಾರೂಢ ಎಎಪಿಯಿಂದ ಹೊರಬಂದರು. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷ ದಲಿತರಿಗೆ ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ. ಪಕ್ಷದ ಉನ್ನತ ನಾಯಕತ್ವದಲ್ಲಿ ದಲಿತ ಸದಸ್ಯರಿಲ್ಲ. ಎಎಪಿಯ ದಲಿತ ಶಾಸಕರು, ಸಚಿವರು ಮತ್ತು ಕೌನ್ಸಿಲರ್‌ಗಳಿಗೆ ಯಾವುದೇ ಗೌರವ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ.