ದಾವಣಗೆರೆ : ರಾಜ್ಯ ರಾಜಕಾರಣದ ಕುರಿತಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ಪೋಟಕ ಹೇಳಿಕೆ ನೀಡಿದ್ದು, ಮಹಾರಾಷ್ಟ್ರದಲ್ಲಿ ಆದ ಸ್ಥೀತಿಯೇ ಕರ್ನಾಟಕದಲ್ಲಿ ಆಗಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮೂರು ತಿಂಗಳು ಕಾದು ನೋಡಿ, ಎನ್ ಸಿಪಿ ಮುಖಂಡ ಅಜಿತ್ ಪವಾರ್ ರೀತಿಯ ನಾಯಕನೊಬ್ಬ ಕಾಂಗ್ರೆಸ್ ನಲ್ಲೇ ಹುಟ್ಟುತ್ತಾನೆ. ಮಹಾರಾಷ್ಟ್ರದಲ್ಲೂ ಆದ ಸ್ಥಿತಿಯೇ ಕರ್ನಾಟಕದಲ್ಲೂ ಆಗಲಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ. ಮೂರು ತಿಂಗಳು ಮಾತ್ರ ಈ ಸರ್ಕಾರ ಇರಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಮೋಸ ಮಾಡಿದ್ದೇವೆ ಎಂದು ಕಾಂಗ್ರೆಸ್ ಶಾಸಕರಲ್ಲೇ ಇದೆ. ಹೀಗಾಗಿ ಕಾಂಗ್ರೆಸ್ ಸರ್ಕಾರ 3 ತಿಂಗಳೂ ಇರುವುದಿಲ್ಲ ಎಂದು ಹೇಳಿದ್ದಾರೆ.