ಶಿಮ್ಲಾ: 6 ಬಾರಿ ಹಿಮಾಚಲಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಮಾಜಿ ಸಿಎಂ ವೀರಭದ್ರ ಸಿಂಗ್ ವಿಧಿವಶರಾಗಿದ್ದಾರೆ.
ದೀರ್ಘ ಕಾಲದ ಅನಾರೋಗ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಶಿಮ್ಲಾದ ಇಂದಿರಾಗಾಂಧಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
87 ವರ್ಷದ ವೀರಭದ್ರ ಸಿಂಗ್ ಎರಡು ಬಾರಿ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಎರಡನೇ ಬಾರಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದ ಅವರಿಗೆ ಹೃದಯ ಸಮಸ್ಯೆ, ಉಸಿರಾಟ ಸಮಸ್ಯೆ ತೀವ್ರಗೊಂಡಿತ್ತು. ಸೋಮವಾರವಷ್ಟೇ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೀರಭದ್ರ ಸಿಂಗ್ 9 ಬಾರಿ ಶಾಸಕರಾಗಿ ಆಯ್ಕೆಯಾದವರು. 5 ಭಾರಿ ಸಂಸದರಾಗಿದ್ದ ಅವರು 6 ಬಾರಿ ಹಿಮಾಚಲಪ್ರದೇಶ ಸಿಎಂ ಆಗಿ ಕಾರ್ಯ ನಿರ್ವಹಿಸಿದ್ದರು.