ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವೀರಭದ್ರಸಿಂಗ್(87) ನಿಧನರಾಗಿದ್ದಾರೆ. ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿದ್ದ ವೀರಭದ್ರಸಿಂಗ್ ದೀರ್ಘಕಾಲದ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಇಂದಿರಾ ಗಾಂಧಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗಿನ ಜಾವನ ನಿಧನರಾಗಿದ್ದಾರೆ.
ಒಂಬತ್ತು ಬಾರಿ ಶಾಸಕ ಮತ್ತು ಐದು ಬಾರಿ ಸಂಸದರಾಗಿದ್ದ ವೀರಭದ್ರಸಿಂಗ್ ಆರು ಬಾರಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪತ್ನಿ ಪ್ರತಿಭಾ ಸಿಂಗ್ ಮಾಜಿ ಸಂಸದರಾಗಿದ್ದಾರೆ. ಪುತ್ರ ವಿಕ್ರಮಾದಿತ್ಯ ಶಿಮ್ಲಾ ಗ್ರಾಮೀಣ ಶಾಸಕರಾಗಿದ್ದಾರೆ.