ಇತ್ತೀಚಿಗಷ್ಟೆ ನಿಧನರಾದ ನಟ, ರಾಜಕಾರಣಿ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರ ಪತ್ನಿ ವಾಣಿ ಕೆ.ಶಿವರಾಮ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಾಣಿ ಕೆ.ಶಿವರಾಮ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು.
ಪತಿ ಗುರುತಿಸಿಕೊಂಡಿದ್ದ ಬಿಜೆಪಿ ಪಕ್ಷದ ಬಗ್ಗೆ ಅಸಮಾಧಾನಗೊಂಡಿರುವ ವಾಣಿ ಕೆ.ಶಿವರಾಮ್ ಅವರು ಇಂದು ಅಧೀಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಜಿ ಐಎಎಸ್ ಅಧಿಕಾರಿ, ರಾಜಕಾರಣಿ ಹಾಗೂ ನಟ ಶಿವರಾಂ ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಇದೀಗ ಪತಿಯಂತೆ ರಾಜಕೀಯ ಸೇವೆ ಸಲ್ಲಿಸಲು ವಾಣಿ ಶಿವರಾಂ ಕಾಂಗ್ರೆಸ್ ಸೇರ್ಪಡೆಯಾದರು.