ಹೃದಯಾಘಾತದಿಂದ ಜೆಡಿಎಸ್ ಮಾಜಿ ಶಾಸಕ ನಾಗನಗೌಡ ಕಂದಕೂರ್ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಎದೆನೋವಿನಿಂದ ಬಳಲುತ್ತಿದ್ದ ನಾಗನಗೌಡ ಕಂದಕೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ 11 ಗಂಟೆಗೆ ಎದೆನೋವು ಕಾಣಿಸಿಕೊಂಡಿತ್ತು. ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಾಗನಗೌಡರನ್ನು ಕುಟುಂಬಸ್ಥರು ಕೂಡಲೇ ಯಾದಗಿರಿ ನಗರದ ಶರಣಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.