alex Certify ಪಂದ್ಯದ ವೇಳೆಯಲ್ಲೇ ಹೃದಯಾಘಾತದಿಂದ ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕೆ. ಹೊಯ್ಸಳ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂದ್ಯದ ವೇಳೆಯಲ್ಲೇ ಹೃದಯಾಘಾತದಿಂದ ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕೆ. ಹೊಯ್ಸಳ ನಿಧನ

ಬೆಂಗಳೂರು: ಕ್ರಿಕೆಟ್ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಹೊಯ್ಸಳ ಪ್ರತಿನಿಧಿಸುತ್ತಿದ್ದರು. ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.

ಪಂದ್ಯದ ನಂತರ ಊಟಕ್ಕೆ ಕುಳಿತುಕೊಳ್ಳುವ ಸಂದರ್ಭ ಅವರು ದಿಢೀರ್ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ವೇಳೆಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮಧ್ಯಮ ಕ್ರಮಾಂಕದ ವೇಗಿಯಾಗಿರುವ ಹೊಯ್ಸಳ ಅಂಡರ್ -15 ವಿಭಾಗದಲ್ಲಿ ಕರ್ನಾಟಕ ತಂಡ ಪ್ರತಿನಿಧಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...