ಬೆಂಗಳೂರು : ಮಾಜಿ ಕಾನೂನು ಸಚಿವ ದಿವಂಗತ ಎಲ್.ಜಿ ಹಾವನೂರು ಅವರ ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಭಾನುವಾರ ನಡೆದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ತಮ್ಮ ಮನೆಯಲ್ಲೇ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳಿಂದ ಒಬ್ಬಂಟಿಯಾಗಿರುತ್ತಿದ್ದ ಅವರು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.