ಶಿವಮೊಗ್ಗ: ಮಾಜಿ ಸಚಿವ ಮತ್ತು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಲಾಗಿದೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಯತ್ನಿಸಿದವರಲ್ಲಿ ಕಾಗೋಡು ತಿಮ್ಮಪ್ಪ ಪ್ರಮುಖರಾಗಿದ್ದಾರೆ. ಜನವರಿ 22ರಂದು ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ಘಟಿಕೋತ್ಸವ ನಡೆಯಲಿದ್ದು, ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.