ಮೈಸೂರಿನ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಮದುವೆಯಾಗಿ ನಂಬಿಸಿ ಮಹಿಳೆಯನ್ನು ವಂಚಿಸಿದ ಆರೋಪದ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.
ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನು ಪ್ರಶ್ನಿಸಿ ದೂರುದಾರೆ ಪ್ರೇಮಕುಮಾರಿ, ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯ ಸಿಐಡಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ವಜಾಗೊಳಿಸಿತ್ತು.
ಸಿಐಡಿ ಪೊಲೀಸರ ಬಿ ರಿಪೋರ್ಟ್ ವಜಾಗೊಳಿಸಿ ವಿಚಾರಣೆಗೆ ಅನುಮತಿ ನೀಡಿದ್ದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಮದಾಸ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೇಲಾ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ ಈಗ ರಾಮದಾಸ್ ಅವರ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯದ ಹಾದಿ ಸುಗಮವಾಗಿದೆ.