ಹುಬ್ಬಳ್ಳಿ : ರಾಜ್ಯ ಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಶಂಕರಪಾಟೀಲ್ ಮುನೇನ ಕೊಪ್ಪ, ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಹ್ವಾನ ಬಂದಿಲ್ಲ. ನಾನು ಕಾಂಗ್ರೆಸ್ ಗೆ ಹೋಗಬೇಕು ಅನ್ನೋದು ನನ್ನ ಮನಸಿನಲ್ಲಿ ಇಲ್ಲ. ನಾನು ಬಿಜೆಪಿಯಲ್ಲೇ ಇರುತ್ತೇನೆ. ಯಾವುದೇ ಪಕ್ಷದಿಂದ ಆಹ್ವಾನ ಬಂದಿಲ್ಲ ಎಂದರು.
ನನ್ನ ರಾಜಕೀಯದ ಬಗ್ಗೆ ಮುಂದಿನ ಜನವರಿಗೆ ನಿರ್ಧಾರ ಮಾಡುತ್ತೇನೆ. ಕಾಂಗ್ರೆಸ್ ನಲ್ಲಿ ನನ್ನ ಸ್ನೇಹಿತರಿದ್ದಾರೆ. ಆದರೆ ಈವರೆಗೂ ಯಾವುದೇ ಆಹ್ವಾನ ಕೊಟ್ಟಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮನಸಿಲ್ಲ. ಮಲ್ಲಿಕಾರ್ಜುನ ಖರ್ಗೆ ಆಗಲಿ, ಡಿಕೆಶಿ ಆಗಲಿ, ಜಗದೀಶ್ ಶೆಟ್ಟರ್ ಸಹ ನನಗೆ ಆಹ್ವಾನ ನೀಡಿಲ್ಲ ಎಂದರು.