
ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿಸಿ ನಡೆಸುತ್ತಿದ್ದು, ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದ್ದು ಇದರ ಮಧ್ಯೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವವರು ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಕೊಪ್ಪಳ ಜಿಲ್ಲೆ ಕನಕಗಿರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಶಿವರಾಜ್ ತಂಗಡಗಿ, ಕೈ ಕಾರ್ಯಕರ್ತರ ಜೊತೆ ಹನುಮ ಮಾಲಾ ಧಾರಣೆ ಮಾಡಿದ್ದು, ಹಿಂದೂ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಈ ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಏಪ್ರಿಲ್ 6 ರಂದು ಹನುಮ ಜಯಂತಿ ಇರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಯರಡೋಣ ಗ್ರಾಮದಲ್ಲಿ ನೂರಾರು ಭಕ್ತರ ಜೊತೆ ಶಿವರಾಜ್ ತಂಗಡಗಿ ಅವರು ಹನುಮ ಮಾಲಾ ಧಾರಣೆ ಮಾಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಕಾರಟಗಿಯ ದೇವಿ ಪರ್ವತದಲ್ಲಿ ಪೂಜಾ ಕಾಯಕದ ಜೊತೆ ವಾಸ ಮಾಡಲಿದ್ದಾರೆ.