ಬೆಂಗಳೂರು : ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಶಾಸಕ ಗೌರಿಶಂಕರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಶಾಸಕರಾದ ಮಂಜುನಾಥ್, ಗೌರಿ ಶಂಕರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ತುಮಕೂರು ಜಿಲ್ಲೆ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಮತ್ತು ಬೆಂಗಳೂರು ದಾಸರಹಳ್ಳಿಯ ಮಾಜಿ ಶಾಸಕ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್, ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರು ಗೈರಾಗಿದ್ದರು.
ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಮುನಿಸಿಕೊಂಡಿದ್ದ ಗೌರಿಶಂಕರ್ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಯಾರ ಮನವೊಲಿಕೆಗೂ ಬಗ್ಗದ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.