ಬೆಂಗಳೂರು: ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ‘ಕೈ’ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಆಯನೂರು ಮಂಜುನಾಥ್ ಬೆಂಬಲಿಗರು ಕೂಡ ಸಾಥ್ ನೀಡಿದರು.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಪ್ರಯತ್ನಿಸಿ ವಿಫಲರಾಗಿದ್ದ ಆಯನೂರು ಮಂಜುನಾಥ್ ಶಿವಮೊಗ್ಗ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು. ರಾಜ್ಯಸಭೆ, ಲೋಕಸಭೆ, ವಿಧಾನಸಭೆ, ವಿಧಾನಪರಿಷತ್ ಹೀಗೆ ನಾಲ್ಕು ಸದನಗಳನ್ನು ಪ್ರತಿನಿಧಿಸಿರುವ ಆಯನೂರು ಮಂಜುನಾಥ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು.