ತುಮಕೂರು : ಲೋಕಸಭೆ ಚುನಾವಣೆ ಹ್ತೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಮುದ್ದಹನುಮೇಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದು, ಮುದ್ದಹನುಮೇಗೌಡ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ.
ಈ ಕುರಿತು ಶಾಸಕ ಎಸ್.ಆರ್. ಶ್ರೀನಿವಾಸ್ ಮಾಹಿತಿ ನೀಡಿದ್ದು, ಮುದ್ದಹನುಮೇಗೌಡ ಅವರು ಹತ್ತು ವರ್ಷ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಹಾಗೂ ಶಾಸಕ, ಸಂಸದರಾಗಿಯೂ ಕೆಲಸ ಮಾಡಿದ್ದಾರೆ. ಅವರನ್ನು ಕಾಂಗ್ರೆಸ್ ಗೆ ಕರೆತರಲು ಎಲ್ಲರೂ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.