ನಟ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಎನ್ ಸಿ ಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ, ಭೂಗತ ಪಾತಕಿ ದಾವೂದ್ ಹೆಸರಿನಲ್ಲಿ ತನಗೆ ಮತ್ತು ತನ್ನ ಕುಟುಂಬಕ್ಕೆ ಕೊಲೆ ಬೆದರಿಕೆ ಬರುತ್ತಿದೆ ಎಂದು ಹೇಳಿದ್ದಾರೆ.
ನಕಲಿ ಟ್ವಿಟರ್ ಖಾತೆಯ ಮೂಲಕ ಅವರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಸಮೀರ್ ವಾಂಖೆಡೆ ಮುಂಬೈ ಪೊಲೀಸರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅವರು ಈ ವಿಷಯವನ್ನು ಪರಿಶೀಲಿಸುತ್ತಿದ್ದು ಹೆಚ್ಚಿನ ತನಿಖೆ ಕೂಡ ನಡೆಯುತ್ತಿದೆ.
ಕಳೆದ ತಿಂಗಳೂ ಸಹ ತನಗೆ ಮತ್ತು ತನ್ನ ಪತ್ನಿಗೆ ಜೀವ ಬೆದರಿಕೆ ಇದೆ ಎಂದು ಸಮೀರ್ ವಾಂಖೆಡೆ ಹೇಳಿದ್ದರು.
ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪ್ರಕರಣದಲ್ಲಿ ತನಿಖೆಯ ನೇತೃತ್ವ ವಹಿಸಿದ್ದ ವಾಂಖೆಡೆ ವಿರುದ್ಧ ಸಿಬಿಐ ಭ್ರಷ್ಟಾಚಾರ ಪ್ರಕರಣ ದಾಖಲಿಸಿತ್ತು.
ಮಾದಕ ದ್ರವ್ಯ ಪತ್ತೆ ಪ್ರಕರಣದ ಕಾರ್ಡೆಲಿಯಾ ಕ್ರೂಸ್ನಲ್ಲಿ ತನ್ನ ಪುತ್ರ ಆರ್ಯನ್ ಖಾನ್ನನ್ನು ಸಿಲುಕಿಸದಿರಲು ಸೂಪರ್ಸ್ಟಾರ್ ಶಾರುಖ್ ಖಾನ್ ಅವರಿಂದ 25 ಕೋಟಿ ರೂ. ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಸಮೀರ್ ವಾಂಖೆಡೆ ಮೇಲಿದೆ.