![](https://kannadadunia.com/wp-content/uploads/2024/01/Hd-Devegowda.jpg)
ಬೆಂಗಳೂರು : ಬಹುನಿರೀಕ್ಷಿತ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನಾಳೆ ಭವ್ಯವಾಗಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದ್ದಾರೆ.
ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬಕ್ಕೆ ಆಹ್ವಾನ ನೀಡಲಾಗಿತ್ತು. ಹೀಗಾಗಿ ಇಂದು ಗೌಡರ ಕುಟುಂಬ ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.
ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರ ಸ್ವಾಮಿ ಅವರು ಅಯೋಧ್ಯೆಗೆ ತೆರಳಿದ್ದು, ನಾಳೆ ನಡೆಯಲಿರುವ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.