ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾಗುವುದನ್ನು ತಡೆಯಲು ನಿನ್ನೆಯಷ್ಟೇ ಮನಮೋಹನ್ ಸಿಂಗ್ ಅವರು ಪ್ರಧಾನಿಗೆ ಪತ್ರ ಬರೆದು ಮಹತ್ವದ ಸಲಹೆ ನೀಡಿದ್ದಾರೆ. ಇಂದು ಅವರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.