
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಈ ಬಾರಿ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ.
ರಾಜ್ಯ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯವು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸುತ್ತಿದೆ.
ಬೆಂಗಳೂರು ವಿಶ್ವವಿದ್ಯಾಲಯ ತನ್ನ 58ನೇ ಘಟಿಕೋತ್ಸವದ ಹಿನ್ನೆಲೆಯಲ್ಲಿ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಮುಂದೆ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.