ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾಜಿ ಪ್ರಧಾನಿ ( H.D Devegowda ) ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ವಿಜಯೇಂದ್ರ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.
ಸುಮಾರು ಕಳೆದ 20 ನಿಮಿಷದಿಂದ ದೇವೇಗೌಡರ ಜೊತೆ ಬಿ.ವೈ ವಿಜಯೇಂದ್ರ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ವಿಜಯೇಂದ್ರ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮತ್ತಿತರರಿದ್ದಾರೆ.