ಹಾಸನ : ಹಾಸನ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹೆಸರಿಡಲು ಮನವಿ ಬಂದಿದೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಹೇಳಿದರು.
ಇಂದು ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ದೇಶಕ್ಕೆ ಪ್ರಧಾಮಂತ್ರಿಯನ್ನು ಕೊಟ್ಟಿರುವ ಜಿಲ್ಲೆ ಹಾಸನ. ಹಾಸನ ಏರ್ ಪೋರ್ಟ್ ಗೆ ಮಾಜಿ ಪ್ರಧಾನಿ ದೇವೇಗೌಡರ ಹೆಸರು ಇಡುವ ಬಗ್ಗೆ ಬೇಡಿಕೆಗಳು ಬಂದಿದೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಮೂವರು ಸಾಧಕರಿಗೆ ‘ಕೆಂಪೇಗೌಡ ಪ್ರಶಸ್ತಿ’ ಪ್ರಧಾನ
ಬೆಂಗಳೂರು : ಕೆಂಪೇಗೌಡ ಜಯಂತಿಯಂದು ( ಜೂ.27) ಇಂದು ಮೂವರು ಸಾಧಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಮಾಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ದೇಶದ ಪ್ರತಿಷ್ಠಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜರೋಧ ಸಂಸ್ಥೆಯ ಸಂಸ್ಥಾಪಕ ನಿತಿನ್ ಕಾಮತ್, ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.