ನವದೆಹಲಿ: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭರವಸೆ ನೀಡಿದ್ದಾರೆ.
ವಾಣಿಜ್ಯ ಬೆಳೆ ತಂಬಾಕಿಗೆ ಸಮರ್ಪಕ ಬೆಂಬಲ ಬೆಲೆ ಮತ್ತು ತಂಬಾಕು ಬೆಳೆಗಾರರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಮಂತ್ರಿ ಮತ್ತು ರಾಜ್ಯಸಭಾ ಸದಸ್ಯರೂ ಆಗಿರುವ ಹೆಚ್. ಡಿ ದೇವೇಗೌಡ ಅವರನ್ನು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್ ಗೌಡ ಅವರು ರೈತರೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ವಾಣಿಜ್ಯ ಸಚಿವರು ಹಾಗೂ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಮುಂದಿನ ಕ್ರಮ ವಹಿಸುವುದಾಗಿ ಹೆಚ್.ಡಿ ದೇವೇಗೌಡರು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಿರಿಯಾಪಟ್ಟಣದ ರೈತ ಮುಖಂಡ ಪ್ರಸನ್ನ ಸೇರಿದಂತೆ ಹುಣಸೂರು ಭಾಗದ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.