alex Certify BREAKING : ನಾಳೆ ದೆಹಲಿಯ ರಾಜ್’ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ. ‘ಮನಮೋಹನ್ ಸಿಂಗ್’ ಅಂತ್ಯಸಂಸ್ಕಾರ |Manmohan Singh | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಾಳೆ ದೆಹಲಿಯ ರಾಜ್’ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ. ‘ಮನಮೋಹನ್ ಸಿಂಗ್’ ಅಂತ್ಯಸಂಸ್ಕಾರ |Manmohan Singh

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನಾಳೆ ದೆಹಲಿಯ ರಾಜ್ ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ನೆರವವೇರಲಿದೆ ಎಂದು ಮೂಲಗಳು ತಿಳಿಸಿದೆ. ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನಕ್ಕೆ ಶೋಕಾಚರಣೆ ಘೋಷಿಸಲಾಗಿದ್ದು, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ನಾಳೆ ಎಐಸಿಸಿ ಪ್ರಧಾನಕಚೇರಿಗೆ ತರಲಾಗುವುದು. ಅವರ ಅಂತಿಮ ವಿಧಿಗಳನ್ನು ರಾಜ್ಘಾಟ್ ಬಳಿ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ ಇಂದು ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಡಾ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗಾಹ್ ಗ್ರಾಮದಲ್ಲಿ ಜನಿಸಿದರು. ಅರ್ಥಶಾಸ್ತ್ರಜ್ಞರಲ್ಲದೆ, ಮನಮೋಹನ್ ಸಿಂಗ್ ಅವರು 1982-1985 ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್(RBI) ಗವರ್ನರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ಸಿಂಗ್ ಅವರು ಕ್ರಮವಾಗಿ 1952 ಮತ್ತು 1954 ರಲ್ಲಿ ಪಂಜಾಬ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು. 1957 ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಿಂದ ತಮ್ಮ ಆರ್ಥಿಕ ಟ್ರಿಪೋಸ್ ಅನ್ನು ಪೂರ್ಣಗೊಳಿಸಿದರು. ಅವರು 1962 ರಲ್ಲಿ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ D.Phil ಪದವಿ ಪಡೆದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...