ಇಸ್ಲಾಮಾಬಾದ್: ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ ಕೆಲವೇ ಗಂಟೆಗಳ ನಂತರ ಮತ್ತೆ ಮಂಗಳವಾರ ಬಂಧಿಸಲಾಗಿದೆ.
ಅವರು ನ್ಯಾಯಾಂಗ ಬಂಧನದಲ್ಲಿದ್ದು, ಆಗಸ್ಟ್ 30 ರ ಬುಧವಾರ ನ್ಯಾಯಾಲಯಕ್ಕೆಹಾಜರುಪಡಿಸಲಾಗುವುದು.ಈ ಪ್ರಕರಣದಲ್ಲಿ ಅವರನ್ನು ಅಧಿಕೃತ ರಹಸ್ಯ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಇಮ್ರಾನ್ ಖಾನ್ ಅವರು ಪಾಕಿಸ್ತಾನದಲ್ಲಿ ಅಧಿಕಾರದಲ್ಲಿದ್ದಾಗ ರಾಜಕೀಯ ಉದ್ದೇಶಗಳಿಗಾಗಿ ಗೌಪ್ಯ ರಾಜತಾಂತ್ರಿಕ ಕೇಬಲ್ (ಸೈಫರ್) ಅನ್ನುದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ತೋಷಾಖಾನ್ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ತೋಷಾಖಾನ್ ಪ್ರಕರಣದಲ್ಲಿ ಇಸ್ಲಾಮಾಬಾದ್ ನ್ಯಾಯಾಲಯವು ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ನಂತರ ಇಸ್ಲಾಮಾಬಾದ್ ನ್ಯಾಯಾಲಯವು ಇಮ್ರಾನ್ ಖಾನ್ ಗೆ ಬೇಲ್ ನೀಡಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಇದೀಗ ಮತ್ತೆ ಇಮ್ರಾನ್ ಖಾನ್ ರನ್ನು ಬಂಧಿಸಲಾಗಿದೆ.