ನವದೆಹಲಿ: ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಅಮರಿಂದರ್ ಸಿಂಗ್ ನಿನ್ನೆಯೇ ದೆಹಲಿಗೆ ತೆರಳಿದ್ದರು. ಅವರು ಬಿಜೆಪಿ ಸೇರ್ಪಡೆಯಾಗುವ ವದಂತಿ ಹರಡಿತ್ತು.
ಆದರೆ ಮನೆ ಸ್ಥಳಾಂತರದ ಉದ್ದೇಶದಿಂದ ದೆಹಲಿಗೆ ಆಗಮಿಸಿರುವುದಾಗಿ ಹೇಳಿದ್ದ ಅಮರೀಂದರ್ ಸಿಂಗ್ ಬಿಜೆಪಿ ಸೇರಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆನ್ನುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಅವರು ಬಿಜೆಪಿಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆ ಎಂದು ಹೇಳಲಾಗಿದೆ.