alex Certify ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಸ್.ಎಸ್. ಧರಮ್ ಸೋತ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಸ್.ಎಸ್. ಧರಮ್ ಸೋತ್ ಅರೆಸ್ಟ್

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ನಾಯಕ ಮತ್ತು ಮಾಜಿ ಪಂಜಾಬ್ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಿದೆ.

ರಾಜ್ಯದಲ್ಲಿ ನಡೆದಿರುವ ಅರಣ್ಯ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಭಾಗವಾಗಿ ಈ ಕ್ರಮ ಕೈಗೊಂಡಿದೆ. ಈ ಪ್ರಕರಣದ ಪರಿಶೀಲನೆಯನ್ನು ಇಡಿ ತೀವ್ರಗೊಳಿಸಿದ್ದು, 64ಧರಮ್ ಸೋತ್ ಅವರನ್ನು ಜಲಂಧರ್‌ನಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಧರಮ್ ಸೋತ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು.

ಮರ ಕಡಿಯಲು ಪರವಾನಗಿಗಳ ವಿತರಣೆ ಮತ್ತು ಇಲಾಖೆಯೊಳಗೆ ವರ್ಗಾವಣೆ ಅಥವಾ ಪೋಸ್ಟಿಂಗ್‌ಗೆ ಸಂಬಂಧಿಸಿದ ವಿಷಯಗಳಲ್ಲಿ ಹಣಕಾಸು ಅಕ್ರಮಗಳು ಮತ್ತು ಭ್ರಷ್ಟಾಚಾರ ತನಿಖೆಯ ಒಂದು ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಸಾಧು ಸಿಂಗ್ ಧರಂಸೋತ್ ಅವರು ಐದು ಬಾರಿ ವಿಧಾನಸಭೆಯ ಸದಸ್ಯರಾಗಿದ್ದಾರೆ. ಕಳೆದ ವರ್ಷ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಿದ್ದರು. ಮನಿ ಲಾಂಡರಿಂಗ್ ಪ್ರಕರಣವು ಪಂಜಾಬ್ ವಿಜಿಲೆನ್ಸ್ ಬ್ಯೂರೋ ದಾಖಲಿಸಿದ ಎಫ್‌ಐಆರ್‌ ಆಧರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...